ರಾಜ್ಯದ ಮಹಿಳಾ ಸರ್ಕಾರಿ ನೌಕರರು ಸಲ್ಲಿಸುವ ಮುಟ್ಟಿನ ರಜೆ ಅರ್ಜಿಗಳು ಇನ್ನು ಮುಂದೆ ಸ್ವಯಂಚಾಲಿತವಾಗಿ ಅನುಮೋದನೆಗೊಳ್ಳಲಿವೆ. ಇದಕ್ಕಾಗಿ ನೌಕರರ ರಜೆ ನಿರ್ವಹಣಾ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆ ಮಾಡಲಾಗಿದೆ.
ಮೇಲಧಿಕಾರಿಗಳ ಅನುಮತಿಗಾಗಿ ಕಾಯುವ ಅಗತ್ಯ ಇಲ್ಲದಿರುವುದರಿಂದ ನೌಕರರಿಗೆ ಅನಗತ್ಯ ಮುಜುಗರ ತಪ್ಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರದ ಈ ಕ್ರಮವನ್ನು ನೌಕರರ ಸಂಘಟನೆಗಳು ಸ್ವಾಗತಿಸಿದ್ದು, ಖಾಸಗಿ ವಲಯದಲ್ಲೂ ಇಂತಹ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಆಗ್ರಹಿಸಿವೆ.




