ಮೂಲ್ಕಿ ಸಮೀಪದ ಕಿಲ್ಪಾಡಿ ಗ್ರಾಮದ ದೈವಸ್ಥಾನವೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಅಂತರರಾಜ್ಯ ಕಳ್ಳರ ತಂಡದ ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳು ಸೇರಿ ಒಟ್ಟು ₹17.20 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ.
ಕರಾವಳಿ ಭಾಗದ ಇತರ ದೇವಸ್ಥಾನ ಕಳ್ಳತನ ಪ್ರಕರಣಗಳಲ್ಲೂ ಈ ತಂಡದ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ.




