ಬರಗಾಲದಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗಾವಕಾಶ ಕುಸಿದಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಹೆಚ್ಚುವರಿ 50 ಮಾನವ ದಿನಗಳ ಕೆಲಸ ಒದಗಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರವನ್ನು ಕೋರಿದೆ.
ಕೆರೆ ಹೂಳೆತ್ತುವುದು, ಬದುಗಳ ನಿರ್ಮಾಣ, ಕೃಷಿ ಹೊಂಡ ಮತ್ತು ಅರಣ್ಯೀಕರಣದಂತಹ ಕಾಮಗಾರಿಗಳ ಮೂಲಕ ಕೂಲಿಕಾರರಿಗೆ ಊರಲ್ಲೇ ಕೆಲಸ ನೀಡುವುದು ಉದ್ದೇಶ.
ಇದರಿಂದ ವಲಸೆ ತಡೆಯುವ ಜೊತೆಗೆ, ಮುಂದಿನ ಮಳೆಗಾಲದಲ್ಲಿ ನೀರು ಸಂಗ್ರಹಕ್ಕೂ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




