ಅರಿವಳಿಕೆ ಔಷಧಿ ನೀಡಿ ಪತ್ನಿಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ವೈದ್ಯರೊಬ್ಬರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಆರೋಪಿಗೆ ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ವಾದ–ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿ ತಿರಸ್ಕರಿಸಿತು.
ವೈದ್ಯಕೀಯ ಜ್ಞಾನವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಇರುವ ಕಾರಣ ಈ ಪ್ರಕರಣ ಸಾರ್ವಜನಿಕರ ಗಮನ ಸೆಳೆದಿದೆ.




